March 26, 2026

ಜೋಕಾಲಿ ಆಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಹಯಾ ಫಾತಿಮಾ ಮೃತ್ಯು

0
image_editor_output_image23050485-1702721837551.jpg

ಮಲಪ್ಪುರಂ: ಜೋಕಾಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸಿಲುಕಿ ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೇರಳದ ಮಳಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟ ಬಾಲಕಿ ಮಳಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ನಿವಾಸಿ ಹಯಾ ಫಾತಿಮಾ ಎಂದು ಗುರತಿಸಲಾಗಿದೆ.

ಬೆಳಗ್ಗೆ ಶಾಲೆಗೆ ಹೋಗಿದ್ದ ಮಗು, ಮನೆಗೆ ಬಂದ ಮೇಲೆ ಜೋಕಾಲಿ ಆಡುತ್ತಿದ್ದಳು. ಜೋಕಾಲಿ ಆಡುತ್ತಿದ್ದಾಗ ದುರಂತ ಹಗ್ಗ ಕುತ್ತಿಗೆಗೆ ಬಿಗಿದಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಪೋಷಕರು ಬಂದು ನೋಡುವಷ್ಟರಲ್ಲಿ ಬಾಲಕಿ ಮೃತಪಟ್ಟಿತ್ತು. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಬಾಲಕಿ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಸಾವನ್ನಪ್ಪಿರುವ ಬಗ್ಗೆ ಶಂಕೆ ಇದೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಆಕೆಯನ್ನು ಬದುಕಿಸಿಕೊಳ್ಳಲು ಆಗಲಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!