February 3, 2026

ಸ್ಪೋಟಕ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಮೃತ್ಯು

0
IMG-20231217-WA0009.jpg

ಮುಂಬೈ: ಸ್ಫೋಟಕ ಉತ್ಪಾದನಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ ನಾಗ್ಪುರದ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ ಕಾರ್ಖಾನೆಯಲ್ಲಿ ಇಂದು ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನು ಈ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಹಾಗೂ ಇನ್ನಿತರ ರಕ್ಷಣಾ ಸಾಧನಗಳನ್ನು ಪೂರೈಕೆ ಮಾಡುತ್ತದೆ.

Leave a Reply

Your email address will not be published. Required fields are marked *

error: Content is protected !!