December 19, 2025

ಚಿಕ್ಕಮಗಳೂರು: ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ:
ಓರ್ವನಿಗೆ ಗಾಯ

0
n33824560616385451415203fa98651811ab481bb71ee9bda9e7fe3495af296253896e8effd4fe6aa914a49.jpg

ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಬಳಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಇಂದು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಯಾಣ ಬೆಳೆಸಿದ್ದರು.

ಈ ವೇಳೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತವಾಗಿದೆ. ಬೆಂಗಾವಲು ವಾಹನ ಕಾಫಿ ತೋಟಕ್ಕೆ ನುಗ್ಗಿದೆ. ಈ ಅಪಘಾತದಲ್ಲಿ ವಾಹನದಲ್ಲಿದ್ದ ಸಿಬ್ಬಂದಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಕ್ಷಣಕ್ಕೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!