June 30, 2026

ಉಳ್ಳಾಲ: ಸೋಮೇಶ್ವರ ಸಮುದ್ರಕ್ಕೆ ಹಾರಿ ಬಸ್ ಚಾಲಕ ಆತ್ಮಹತ್ಯೆ

0
image_editor_output_image844803013-1702971908455.jpg

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ.

ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.

ಇವರ ತಂದೆ ಕೂಡ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!