March 18, 2026

ಕೋವಿಡ್ ಆತಂಕ:
ಗಡಿ ಭಾಗದಲ್ಲಿ ಕಠಿಣ ನಿರ್ಬಂಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್

0
download.jpeg

ಬೆಂಗಳೂರು: ಕೇರಳ, ತಮಿಳುನಾಡಿನಲ್ಲಿ ಕೋವಿಡ್ ಹೊಸ ಉಪತಳಿ (ಜೆನ್.1) ಪತ್ತೆಯಾಗಿರುವ ಕಾರಣಕ್ಕೆ ರಾಜ್ಯದಲ್ಲಿ ಅಂತಾರಾಜ್ಯ ಗಡಿ ಬಂದ್ ಸೇರಿ ಕಠಿಣ ನಿರ್ಬಂಧಗಳನ್ನು ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚುವರು, ರಾಜ್ಯದಲ್ಲಿ ಕೋವಿಡ್ ಉಪತಳಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ. ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದ ಗಡಿಯಲ್ಲಿ ಕಟೆಚ್ಚರ ವಹಿಸಲಾಗಿದೆ. ಹೊರ ರಾಜ್ಯಗಳಿಂದ ಬಂದವರ ಪೈಕಿ ಕೋವಿಡ್ ಸೋಂಕು ಲಕ್ಷಣಗಳು ಉಳ್ಳವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!