ಸಜೀಪನಡು: ಕಾರು-ಬೈಕ್ ಢಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಸಜೀಪನಡು ಎಂಬಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಲೊರೆಟ್ಟೋ ನಿವಾಸಿ ಖಲಂದರ್ ಶಾಫಿ ಗಾಯಗೊಂಡ ವ್ಯಕ್ತಿ. ಖಲಂದರ್ ಶಾಫಿ ಅವರು ಮುಡಿಪು ಕಡೆಯಿಂದ ಲೊರೆಟ್ಟೊ ಕಡೆಗೆ ಮುಂಜಾನೆ ಸುಮಾರು 3 ಗಂಟೆ ವೇಳೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಬಿ.ಸಿ ರೋಡಿನ ಕಡೆಯಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ನಜೀಪನಡು ಎಂಬಲ್ಲಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯಿಂದ ಬೈಕ್ ಸವಾರ ಖಲಂದರ್ ಅವರಿಗೆ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ರಿತೇಶ್ ಅವರ ಅತೀ ವೇಗ ಮತ್ತು ಅಜಾಗರೂಕತೆಯಿಂದ ಮಾಡಿದ ಚಾಲನೆಯೇ ಅಪಘಾತ ಸಂಭವಿಸಲು ಕಾರಣ ಎಂದು ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




