March 18, 2026

ರಾಜ್ಯದಲ್ಲಿ ಕೋವಿಡ್ ಭೀತಿ: ಇನ್ಮುಂದೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ

0
image_editor_output_image-1579275289-1703059074388.jpg

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್‌ ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

You may have missed

error: Content is protected !!