May 9, 2026

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ವಿರುದ್ಧ ಗಡಿಪಾರು ನೋಟಿಸ್ ಜಾರಿ

0
image_editor_output_image233360103-1703063434366.jpg

ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ.

ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37) ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿನಾಕಾರಣ ಕ್ಷುಲ್ಲಕ ವಿಚಾರಗಳಿಗೆ ತನ್ನ ಸಹಚರರೊಂದಿಗೆ ತಕರಾರು ನಡೆಸಿ ದೊಂಬಿ, ಹಲ್ಲೆ ನಡೆಸುತ್ತಾ ಜನರಿಗೆ ಬೆದರಿಕೆ ಹಾಕಿರುವ ಪ್ರಕರಣದ ಆರೋಪಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!