May 9, 2026

ಶಾಲೆಗೆ ತೆರಳುತ್ತಿದ್ದ 7ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು

0
image_editor_output_image-1201695114-1703063804386.jpg

ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ 7ನೇ ತರಗತಿ ವಿಧ್ಯಾರ್ಥಿನಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

ಮೃತ ವಿಧ್ಯಾರ್ಥಿನಿಯನ್ನು ಸೃಷ್ಟಿ (13) ಎಂದು ಗುರುತಿಸಲಾಗಿದೆ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ.

ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸೃಷ್ಟಿ ಸಾವನ್ನಪ್ಪಿದ್ದಾಳೆ. ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದು, ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!