May 9, 2026

ಕಾರ್ಕಳ: ಮರಕ್ಕೆ ಗುದ್ದಿದ ಟೂರಿಸ್ಟ್ ಬಸ್:
ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

0
IMG-20231220-WA0000.jpg

ಕಾರ್ಕಳ: ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್‌ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು ಮಂಗಳವಾರ ಕುದುರೆಮುಖ ಹಾಗೂ ಶೃಂಗೇರಿಗೆ ಪ್ರವಾಸ ಹೊರಟಿದ್ದರು. ಬುಧವಾರ ಮಧ್ಯಾಹ್ನ ವಾಪಸಾಗುತ್ತಿದ್ದ ವೇಳೆ ಮಾಳದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಬಸ್‌ನಲ್ಲಿ 43 ಮಂದಿ ವಿದ್ಯಾರ್ಥಿಗಳು, ಐವರು ಶಿಕ್ಷಕರಿದ್ದು, ಅವರ ಪೈಕಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!