ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವು
ಹೂಡೆ: ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಹೂಡೆಯಲ್ಲಿ ನಿಧನರಾಗಿದ್ದಾರೆ.
ಮೃತರನ್ನು ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಫ್ಕಾರ್ (17) ಎಂದು ಗುರುತಿಸಲಾಗಿದೆ.
ಇವರು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ಸಕ್ರಿಯ ಕಾರ್ಯಕರ್ತರಾಗಿದ್ದರು. ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಶಿಕ್ಷಣ ಪೂರೈಸಿದ್ದರು.
ಮೃತರು ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯರಾದ ಇದ್ರಿಸ್ ಹೂಡೆಯವರ ಸಹೋದರ ಅನ್ವರ್ ಕೆಯವರ ಪುತ್ರರಾಗಿದ್ದಾರೆ.





