December 19, 2025

ರಾಹುಲ್ ಗಾಂಧಿ ಯಾರು? ನನಗೆ ಗೊತ್ತಿಲ್ಲ: ಅಸಾದುದ್ದೀನ್ ಓವೈಸಿ

0
images-15.jpeg

ನ‌ವ ದೆಹಲಿ: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್-ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಶುಕ್ರವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷವು “ಸ್ಫೋಟಗೊಳ್ಳುತ್ತದೆ” ಎಂದು ಘೋಷಿಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಹಲವಾರು ರಾಜ್ಯಗಳಲ್ಲಿ ಏಕಕಾಲದಲ್ಲಿ ವಿಸ್ತರಿಸುವ ಪ್ರಯತ್ನವನ್ನು ಉಲ್ಲೇಖಿಸಿದ ಓವೈಸಿ, ಅವರು ಇತರ ರಾಜ್ಯಗಳಲ್ಲಿ ಹೋರಾಟವನ್ನು ಮುಂದುವರಿಸಬೇಕು ಮತ್ತು ಕಾಂಗ್ರೆಸ್‌ ಎರಡು ಮೂರು ವರ್ಷದಲ್ಲಿ ಒಡೆದು ಚೂರಾಗುತ್ತದೆ ಎಂದರು.

ಓವೈಸಿಗೆ ರಾಹುಲ್ ಗಾಂಧಿ ನಾಯಕತ್ವದಲ್ಲಿ ನಂಬಿಕೆ ಇಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಯಾರು? ನನಗೆ ಆತನ ಪರಿಚಯವಿಲ್ಲ. ಅವರು ಯಾರೆಂದು ನಿಮಗೆ ತಿಳಿದಿದ್ದರೆ ದಯವಿಟ್ಟು ನನಗೆ ತಿಳಿಸಿ ಎಂದು ಓವೈಸಿ ಹೇಳಿದರು.

ಓವೈಸಿಗೆ ಪ್ರಶ್ನೆಗೆ ಉತ್ತರಿಸಿದ ತ್ರಿವೇದಿ, ಎಐಎಂಐಎಂನಂತಹ ಪಕ್ಷಗಳು ಮತ್ತು ಓವೈಸಿಯಂತಹ ನಾಯಕರು ಕಾಂಗ್ರೆಸ್‌ನಿಂದ ಬೆಳೆದು ಬಂದಿದ್ದಾರೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!