December 18, 2025

ಮಂಗಳೂರು ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್‌ ಮಾನಿಟರಿಂಗ್‌ ಆ್ಯಪ್ ಅನುಷ್ಠಾನ: ಯು.ಟಿ.ಖಾದರ್

0
image_editor_output_image-89893747-1703140944879.jpg

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್‌ ಮಾನಿಟರಿಂಗ್‌ ಆಪ್‌ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್‌ ಹೇಳಿದ್ದಾರೆ.

ಅವರು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧಿಕಾರಿಗಳು , ಅಧ್ಯಕ್ಷರು, ಉಪಾಧ್ಯಕ್ಷರು , ಉಳ್ಳಾಲ ತಾಲೂಕು ತಹಶೀಲ್ದಾರ್‌ಸಮ್ಮುಖದಲ್ಲಿ ಹಮ್ಮಿಕೊಂಡ ಕುಡಿಯುವ ನೀರು ಕುರಿತ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ಮಾರ್ಚ್‌, ಎಪ್ರಿಲ್‌, ಮೇ ತಿಂಗಳಲ್ಲಿ ಮಂಗಳೂರು ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಯೋಜನೆಗೆ ತೊಂದರೆಯಾಗದಂತೆ ಅಧಿಕಾರಿಗಳು, ಪಿಡಿಓ, ಸೆಕ್ರೆಟರಿಗಳು ಪಂಚಾಯಿತಿ ಅಧ್ಯಕ್ಷರು , ಗ್ರಾಮದ ಹಿರಿಯರನ್ನು ಕ್ರೂಢೀಕರಿಸಿಕೊಂಡು ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ. ಕಳೆದ ವರ್ಷ ಯಾವ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಅನ್ನುವ ಕುರಿತು ವರದಿಯನ್ನು ಅಧಿಕಾರಿಗಳಿಂದ ಪಡೆಯಲಾಗಿದೆ.

ಆ ಭಾಗಗಳಲ್ಲಿ ಪ್ರಸಕ್ತ ವರ್ಷ ತೊಂದರೆಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆ ಹಾಗೂ ಅಧಿಕಾರಿಗಳು ಪೂರ್ವಭಾವಿಯಾಗಿ ತಯಾರಿರಬೇಕು ಅನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!