March 19, 2026

ಜಪ್ಪಿನಮೊಗರು: ಮೀನು ಸಾಗಿಸುತ್ತಿದ್ದ ಲಾರಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

0
image_editor_output_image-2044263187-1703150954497.jpg

ಮಂಗಳೂರು: ಬೈಕಿಗೆ ಮೀನು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದೆ.

ಮೃತರನ್ನು ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ.

ಬೈಕಿನ ಮಿರರ್ ಗೆ ತಾಗಿದ್ದರಿಂದ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆ ಮತ್ತು ದೇಹದ ಮೇಲಿನಿಂದಲೇ ಲಾರಿಯ ಚಕ್ರ ಹರಿದು ಹೋಗಿದೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಕಂಕನಾಡಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತೆರವು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!