ಹೊಟ್ಟೆಯಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ: ನೈಜೀರಿಯಾ ಪ್ರಜೆಯ ಬಂಧನ
ಬೆಂಗಳೂರು: ಹೊಟ್ಟೆಯಲ್ಲಿ 20 ಕೋಟಿ ರೂ. ಮೌಲ್ಯದ 2 ಕೆಜಿ ಕೊಕೇನ್ ಮಾದಕ ದ್ರವ್ಯ ಸಾಗಿಸಲು ಯತ್ನಿಸಿದ ಪ್ರಯತ್ನವನ್ನು ವಿಫಲಗೊಳಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.
ನೈಜೀರಿಯಾದ ಪ್ರಜೆ ತನ್ನ ಹೊಟ್ಟೆಯೊಳಗೆ ಕ್ಯಾಪ್ಸುಲ್‌ಗಳಲ್ಲಿ ಕೊಕೇನ್ ಅನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ್ದ. ಕಸ್ಟಮ್ಸ್ ಅಧಿಕಾರಿಗಳು 99 ಕ್ಯಾಪ್ಸುಲ್‌ಗಳಲ್ಲಿ ಬಚ್ಚಿಟ್ಟಿದ್ದ 2 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕ ಇಥಿಯೋಪಿಯಾದ ಅಡಿಸ್ ಅಬಾಬಾದಿಂದ ಬೆಂಗಳೂರಿಗೆ ಆಗಮಿಸಿದ್ದ. 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಕೊಕೇನ್‌ನ 99 ಕ್ಯಾಪ್ಸುಲ್‌ಗಳನ್ನು ಅವನ ಹೊಟ್ಟೆಯಿಂದ ಹೊರತೆಗೆಯಲಾಗಿದೆ. ಶಂಕಿತ ವ್ಯಕ್ತಿ ಡಿ. 11ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಎನ್ನಲಾಗಿದೆ.





