March 18, 2026

ಮಂಗಳೂರು: ಯುವತಿಯ ಜೊತೆ ನಿಂತಿದ್ದ ಅನ್ಯಕೋಮಿನ ಯುವಕನಿಗೆ ಹಲ್ಲೆ: ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

0
image_editor_output_image-1007927548-1703311860329.jpg

ಮಂಗಳೂರು: ಯುವತಿಯ ಜೊತೆ ಇನ್ನೊಂದು ಧರ್ಮದ ಯುವಕ ನಿಂತಿದ್ದಕ್ಕೆ ಸಂಘಪರಿವಾರದ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.

ನಗರದ ಹಂಪನಕಟ್ಟೆ ಸಮೀಪದ ಮಿಲಾಗ್ರಿಸ್ ಬಳಿ ಗುರುವಾರ ಇಬ್ಬರು ಜೊತೆಯಾಗಿರುವುದನ್ನು ಗಮನಿಸಿದ ಸಂಘಪರಿವಾರದ ಕಾರ್ಯಕರ್ತರು ಯುವಕನನ್ನು ಪ್ರಶ್ನಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ವೀಡಿಯೋ ಶುಕ್ರವಾರ ವೈರಲ್ ಆಗಿದ್ದು, ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!