ಮಂಗಳೂರು: ಕೋವಿಡ್ ಬಳಲುತ್ತಿದ್ದ ವ್ಯಕ್ತಿ ಸಾವು
ಮಂಗಳೂರು: ಮಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ಉತ್ತರ ಭಾರತ ಮೂಲದ 40 ವರ್ಷದ ವ್ಯಕ್ತಿಯನ್ನು ಎರಡು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇವರು ವೆನ್ಲಾಕ್ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೆನ್ಲಾಕ್ ನ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಇವರು ವಲಸೆ ಕಾರ್ಮಿಕನಾಗಿ ಮಂಗಳೂರಿಗೆ ಬಂದಿದ್ದರು. ಕೋವಿಡ್ ನಿಂದಲೇ ಸಾವು ಆಗಿದೆಯಾ ಎಂದು ದೃಢಪಡಿಸಬೇಕಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೆ ಮೃತಪಟ್ಟ ವ್ಯಕ್ತಿ ಡಯಾಬಿಟಿಸ್, ಆಲ್ಕೋಹಾಲಿಕ್ ಆಗಿದ್ದ ಎಂದು ಕೂಡಾ ತಿಳಿದು ಬಂದಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.





