ನೇಜಾರು ನಾಲ್ವರ ಹತ್ಯೆ ಪ್ರಕರಣ: ನರಹಂತಕ ಪ್ರವೀಣ್ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರಹಂತಕ ಪ್ರವೀಣ್ ಚೌಗಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿಯವರು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಗುರುವಾರ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.
ಆರೋಪಿ ಪರ ವಕೀಲ ಕೆ.ಎಸ್.ಎನ್.ರಾಜೇಶ್ ಅವರು ವಾದ ಮಂಡಿಸಲು ಅವಕಾಶ ಕೋರಿದರು. ಆ ಹಿನ್ನೆಲೆಯಲ್ಲಿ ನ್ಯಾಯಾಧೀಶ ದಿನೇಶ್ ಹೆಗ್ಡೆ ಅವರು ಡಿ. 29ಕ್ಕೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಿದರು. ಇದೇ ದಿನ ಸರಕಾರಿ ಅಭಿಯೋಜಕರು ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.





