ಕಡಬ: ಓಮ್ನಿ, ಕ್ರೆಟಾ ಕಾರು ಅಪಘಾತ: ಓರ್ವ ಮೃತ್ಯು, ಹಲವರಿಗೆ ಗಂಭೀರ ಗಾಯ
ಕಡಬ: ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿರುವುದು ವರದಿಯಾಗಿದೆ.
ಘಟನೆಯು ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶನಿವಾರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದಾರೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ.





