May 9, 2026

ಫರಂಗಿಪೇಟೆ: ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಓರ್ವ ಮೃತ್ಯು:
ಸಹ ಸವಾರೆ ಪತ್ನಿ ಗೆ ಗಾಯ

0
n56813419017033958421009444f33b00ae2b35779917b1dbb4d602c371abd34d1a5a136fc9fc479e0655c2.jpg

ಮಂಗಳೂರು: ಫರಂಗಿಪೇಟೆ ಸಮೀಪ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂದು ಗುರುತಿಸಲಾಗಿದೆ. ಬೈಕ್ ನ ಹಿಂಬದಿಯಲ್ಲಿದ್ದ ರಮ್ಲಾನ್ ಅವರ ಪತ್ನಿ ಅದೃಷ್ವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮ್ಲಾನ್ ಮೃತಪಟ್ಟರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!