March 18, 2026

ಬಂಟ್ವಾಳ: ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

0
IMG-20231224-WA0035.jpg


ಬಂಟ್ವಾಳ: ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ
ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.


ಇವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆ ಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.

ಇತ್ತೀಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಪ್ ವೊಂದರಲ್ಲಿ ರೂ 21ಲಕ್ಷ ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು.

ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು.
ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸೈ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ‘ಪ್ರಜಾವಾಣಿ’ ಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!