March 18, 2026

ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ: ಅನಂತ್ ಕುಮಾರ್ ಹೆಗ್ಡೆ

0
DrAFs6bVAAEpLPh-e1575304307576.jpg

ಕಾರವಾರ: ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಹುಚ್ಚು ಸರ್ಕಾರವಾಗಿದೆ. ಅಲ್ಪಸಂಖ್ಯಾತರ ಮತಗಳು ಇಲ್ಲದೆ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಅವರು ಎಂದಿಗೂ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರು ಯಾರು ಬೇಕಾದರೂ ಏನು ಬೇಕಾದರೂ ಡ್ರೆಸ್ ಹಾಕಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ. ಇಂತಹ ಹೇಳಿಕೆ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತದೆ. ಅವರು ಹಿಜಾಬ್ ಹಾಕಿಕೊಂಡು ಹೋಗುತ್ತಾರೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗುತ್ತಾರೆ. ಹಿಜಾಬ್ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!