ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ:
ಮಂಗಳೂರು: ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆಳ್ವಾಸ್ ಕಾಲೇಜಿನ ಹಾಸ್ಟೆಲ್ ಬಾತ್ ರೂಂನಲ್ಲಿ ಕೃತ್ಯ ಎಸಗಿದ್ದು, ಸಾವಿನ ಬಗ್ಗೆ ಶಂಕೆ ಮೂಡಿದೆ.
ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ನಿವಾಸಿಯಾಗಿದ್ದು, ಮಗ ದಿಢೀರ್ ಸಾವಿಗೆ ಶರಣಾಗಿದ್ದು ಹೆತ್ತವರನ್ನು ಗಾಬರಿಗೀಡು ಮಾಡಿದೆ. ತಾವು ಬರುವ ವರೆಗೂ ಶವ ಹೊರ ತೆಗೆಯದಂತೆ ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಮೂಡಬಿದ್ರೆ ಠಾಣೆ ಪೊಲೀಸರು ಸ್ಥಳದಲ್ಲಿದ್ದಾರೆ.





