ನದಿಯಲ್ಲಿ ಆಟವಾಡುತ್ತಿದ್ದಾಗ ಮುಳುಗಿ ಯುವತಿ ಮೃತ್ಯು
ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಇಲ್ಲಿನ ಗೊರೂರಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬವರ ಪುತ್ರಿ ನಿತ್ಯ (19) ಎಂದು ಗುರುತಿಸಲಾಗಿದೆ.
ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯುವತಿ ತೆರಳಿದ್ದಳು. ಈ ವೇಳೆ ಪೂಜೆ ಸಲ್ಲಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.





