ಮಡಿಕೇರಿ: ಚಾರಣಕ್ಕೆ ತೆರಳಿದ್ದ ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಜತಿನ್ ಕುಮಾರ್ (25) ಎಂದು ಗುರುತಿಸಲಾಗಿದ್ದು, ಈತ ಹರಿಯಾಣ ಮೂಲದ ನಿವಾಸಿಯಾಗಿದ್ದಾನೆ.
ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ ವೀಕ್ಷಣೆ ವೇಳೆ ಈ ಅವಘಡ ಸಂಭವಿಸಿದೆ.
