ಪ್ರವಾಸಕ್ಕೆ ಹೊರಟ್ಟಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ
ಹಾವೇರಿ: ಪ್ರವಾಸಕ್ಕೆ ಹೊರಟ್ಟಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪುರ ಕ್ರಾಸ್ ಬಳಿ ನಡೆದಿದೆ.
ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸಕ್ಕೆ ಆಗಮಿಸಿದ್ದ ವೇಳೆ ದುರ್ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ನಾಲ್ವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.




