December 16, 2025

ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಸರ್ಕಾರದಿಂದ 40 ಸಾವಿರ ಕೋಟಿ ಅವ್ಯವಹಾರ: ಯತ್ನಾಳ್ ಆರೋಪ

0
BasanagoudaPatilYatnalVb_vb_60.jpeg

ಬೆಂಗಳೂರು: ಕೊರೊನಾ ಮೊದಲನೇ ಅಲೆ ವೇಳೆ ಯಡಿಯೂರಪ್ಪ ಮುಖ್ಯಮಂತ್ರಿ ಇದ್ದರು. ಈ ವೇಳೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.

ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಕೊರೊನಾ ವೇಳೆ 45 ರೂಪಾಯಿ ಮಾಸ್ಕ್ ಗರ 485 ರೂಪಾಯಿ ನಿಗದಿಪಡಿಸಿದರು ಎಂದೂ ಅವರು ಆರೋಪ ಮಾಡಿದ್ದಾರೆ. ಬೆಡ್ ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು.

ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದಿದ್ದಾರೆ. ನಮ್ಮ ಸರ್ಕಾರ ಇದ್ರೆ ಏನು ಆಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ 5 ಲಕ್ಷ ರೂಪಾಯಿ ಬಿಲ್ ಹಾಕಿದರು. ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!