ಮಹಿಳೆಯರನ್ನು ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ WIM ನಿಂದ ದೂರು ದಾಖಲು

ಬೆಳ್ತಂಗಡಿ: ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನ ವಿರುದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಧರ್ಮಸ್ಥಳ ಪೋಲೀಸ್ ಠಾಣೆಗೆ ದೂರನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ WIM ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಆಶಿಕಾ, ಅಝ್ವೀನಾ ಚಾರ್ಮಾಡಿ, ಸಾಹಿನಾ, ಆಯಿಷಾ, ಮರಿಯಮ್ಮ ಉಪಸ್ಥಿತರಿದ್ದರು.