May 9, 2026

ಕಡಬ: ಮೇಲ್ಛಾವಣಿಯಿಂದ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು

0
image_editor_output_image-1323347707-1703650582916

ಕಡಬ: ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್‌ ಮೃತ ಯುವಕ.

ನ. 12ರಂದು ಕಾಮಗಾರಿ ನಡೆಯುತ್ತಿದ್ದ ಅವರ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗದಲ್ಲಿ ಗಂಭೀರ ಗಾಯವಾಗಿತ್ತು.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್‌ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು.

ಮೃತರು ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

error: Content is protected !!