5 ಖಾಸಗಿ ಬಸ್ ಗಳ ನಡುವೆ ಸರಣಿ ಅಪಘಾತ: 25 ಮಂದಿಗೆ ಗಾಯ
ಬೆಂಗಳೂರು/ನೆಲಮಂಗಲ: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ನೆಲಮಂಗಲ ತಾಲೂಕಿನ ತೊಣಚಿನಗುಪ್ಪೆ ಬಳಿ ಸರಣಿ ಅಪಘಾತ ನಡೆದಿದ್ದು, ಭಾರೀ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.
5 ಖಾಸಗಿ ಬಸ್ ಗಳ ನಡುವೆ ಈ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬಸ್‌ಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿದ್ದಾರೆ. ಅಲ್ಲದೆ ಸ್ಥಳೀಯರ ನೆರವಿನೊಂದಿಗೆ ಬಸ್ ಬಸ್ ಗಳ ಮಧ್ಯೆ ಸಿಲುಕಿರುವ ಜನರು ಜನರನ್ನ ಹೊರಗೆ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.




