May 9, 2026

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

0
image_editor_output_image235856462-1703657041438.jpg

ಬೆಂಗಳೂರು: ಕಾರೊಂದು ಚಲಿಸುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಹೊತ್ತಿ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬೆಂಗಳೂರಿನ ನೆಲಮಂಗಲದ ಅಂಚೆಪಾಳ್ಯದಲ್ಲಿ ನಡೆದಿದೆ.

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗ ಧಗನೆ ಹೊತ್ತಿ ಉರಿದು ಭಸ್ಮವಾಗಿದೆ. ಕಾರಿನಲ್ಲಿದ್ದ ವ್ಯಕ್ತಿಗೆ ಹೊರ ಬರಲಾಗದೆ ಕಾರಿನೊಳಗಡೆಯೇ ಸಜೀವ ದಹನ ಆಗಿದ್ದಾರೆ. ಈ ವೇಳೆ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!