September 26, 2026

ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ

0
image_editor_output_image-1192075267-1703744513172.jpg

ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಮಂಜುನಾಥ ಅಲಿಯಾಸ್ ಓಲಂಗ ಎಂಬಾತ ಗುಂಡೇಟು ತಿಂದ ಆರೋಪಿಯಾಗಿದ್ದಾನೆ.

 

ಮೂರು ದಿನದ ಹಿಂದೆ ಶಶಿ ಎನ್ನುವ ಯುವಕನಿಗೆ ಚಾಕು ಇರಿದಿದ್ದ ಪ್ರಕರಣದಲ್ಲಿ ಬಾಗಿಯಾಗಿದ್ದ ಮಂಜು ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆದರೆ ಬುಧವಾರ ಸಂಜೆ ಜಯನಗರ ಪೊಲೀಸ್ ಠಾಣೆಗೆ ಬಂದು ಸರೇಂಡರ್ ಆಗಿದ್ದ ಮಂಜು ಓಲಂಗ.

ಬುಧವಾರ ರಾತ್ರಿ ಹಲ್ಲೆ ನಡೆಸಿದ್ದ ಪ್ರದೇಶಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಮಂಜು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಪೊಲೀಸರು ಆತ್ಮ ರಕ್ಷಣೆಗೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!