March 18, 2026

ಬಂಟ್ವಾಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ: ಯುವತಿ ಗಂಭೀರ-ಆಸ್ಪತ್ರೆಗೆ ದಾಖಲು

0
image_editor_output_image-769514185-1703784691342

ಬಂಟ್ವಾಳ: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾದ ಘಟನೆ ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 9 ಗಂಟೆ ವೇಳೆ ನಡೆದಿದೆ.
ಇಲ್ಲಿನ ಸ್ಥಳೀಯ ‌ನಿವಾಸಿ ಚೈತ್ರ (22 ) ಗಾಯಗೊಂಡ ಯುವತಿ.

 
ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರು ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ.
ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಇವಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
‌ಇದೇ ಸಂದರ್ಭದಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ‌ ಎ.ಎಸ್ಐ.ಸುರೇಶ್ ಪಡಾರ್, ಹೆಚ್.ಸಿ.ರಮೇಶ್   ಅವರ ಖಾಸಗಿ ವಾಹನದ ಮೂಲಕ ಗಾಯಳು ಚೈತ್ರಳನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಈಕೆ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ನಿಂತಿದೆ.
ಕಾರು ಚಾಲಕ ಹಾಗೂ ಹಾಗೂ ಇವನ ಜೊತೆ ಇದ್ದ ಸಹಪ್ರಯಾಣಿಕ ಪರಾರಿಯಾಗಿದ್ದಾರೆ.
ಗಾಂಜಾ ಸೇವನೆ ಮಾಡಿ ಕಾರು ಚಾಲನೆ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಲ್ಲದೆ,ಕಾರಿನ ಡಯಾಸ್ ನೊಳಗೆ ಗಾಂಜಾ ಸಿಕ್ಕಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ‌ಬೇಟಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.
ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!