May 9, 2026

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು

0
image_editor_output_image-2112353302-1703829280226.jpg

ಪುತ್ತೂರು: ಪುತ್ತೂರಿನ ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಬಳಿ ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ನಡೆದಿದೆ.

ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯ ಚಲಾಯಿಸುತ್ತಿದ್ದ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ.

ಹೊಳೆಯಲ್ಲಿ ನೀರು ಕಡಿಮೆ ಇರುವ ಕಾರಣಕ್ಕೆ ನಡೆಯಬಹುದಾಗಿದ್ದ ದೊಡ್ಡ ಅವಘಡವೊಂದು ತಪ್ಪಿದೆ. ಪ್ರಸಾದ್ ಪಂಗಣ್ಣಾಯ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಳೆದ ವರ್ಷ ಇದೇ ಸ್ಥಳದಲ್ಲಿ ಮಾರುತಿ ಕಾರೊಂದು ಹೊಳೆಗೆ ಬಿದ್ದು ಇಬ್ಬರು ನೀರುಪಾಲಾದ ಘಟನೆಯ ನೆನಪು ಮಾಸುವ ಮುನ್ನ ಈ ಘಟನೆ ನಡೆದಿದೆ.

ಸೇತುವೆಗೆ ತಡೆಗೋಡೆ ನಿರ್ಮಿಸಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಸರಕಾರದ ಇಲಾಖೆಯಾಗಲೀ, ಜನಪ್ರತಿನಿಧಿಗಳಾಗಲೀ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ದೃಶ್ಯ ಬೈತಡ್ಕ ಮಸೀದಿಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವೈರಲ್ ಆಗುತ್ತಿದೆ.

Leave a Reply

Your email address will not be published. Required fields are marked *

error: Content is protected !!