ಪೇಂಟಿಂಗ್ ಮಾಡುತ್ತಿದ್ದ ಯುವಕ ಕುಸಿದುಬಿದ್ದು ಮೃತ್ಯು
ಇಂದೋರ್: ಪೇಂಟಿಂಗ್ ಮಾಡುತ್ತಿದ್ದ ಯುವಕನೊಬ್ಬ ದಿಢೀರನೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೃತ ಯುವಕನನ್ನು ಪೇಂಟರ್ ಆಶಿಶ್ ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಇಂದೋರ್ ನಲ್ಲಿ ಆಶಿಶ್ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸುಸ್ತು ಕಾಣಿಸಿಕೊಂಡಿತ್ತು.
ನಂತರ ಮುಖತೊಳೆದುಕೊಂಡು ಬಂದು, ಪೇಂಟ್ ಬಕೆಟ್ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ. ಆದರೆ ಸ್ವಲ್ಪ ಹೊತ್ತಿನಲ್ಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿದೆ.





