May 9, 2026

ಬಂಟ್ವಾಳ: ಬೈಕ್ ಸವಾರನ ಮೇಲೆ ಹರಿದ ಲಾರಿ:
ಬೆಂಗ್ರೆ ನಿವಾಸಿ ರಮೀಜ್ ಸ್ಥಳದಲ್ಲೇ ಮೃತ್ಯು

0
image_editor_output_image-1533368627-1703904013341

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ ರೋಡಿನ ಸರ್ಕಲ್ ಬಳಿ ನಡೆದಿದೆ.

ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದಾನೆ. ಅವನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೋಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.

ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.

ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿ.ಸಿ ರೋಡಿನ ಎನ್.ಜಿ. ಸರ್ಕಲ್ ನಲ್ಲಿ ಘಟನೆ ಬಳಿಕ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

Leave a Reply

Your email address will not be published. Required fields are marked *

error: Content is protected !!