March 18, 2026

ಪುತ್ತೂರು: ನಗರಸಭೆ ಉಪಚುನಾವಣೆ:
ಒಂದು ಕಡೆ ಬಿಜೆಪಿ, ಇನ್ನೂಂದು ಕಡೆ ಕಾಂಗ್ರೆಸ್ ಜಯಭೇರಿ:
ಪುತ್ತಿಲ ಪರಿವಾರಕ್ಕೆ ಎರಡು ಕಡೆ ಸೋಲು

0
image_editor_output_image-847148756-1703907489442

ಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಡಿ.30ರಂದು ಪ್ರಕಟಗೊಂಡಿದ್ದು ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಹಾಗೂ ವಾರ್ಡ್ -11ರಲ್ಲಿ ಬಿಜೆಪಿಯ ರಮೇಶ್ ರೈ ಹಾಗೂ ಗೆಲುವು ಸಾಧಿಸಿದ್ದಾರೆ.

ದಿನೇಶ್ ಶೇವಿರೆ ಹಾಗೂ ರಮೇಶ್ ರೈ ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ. ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯಗಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!