ಕಾಸರಗೋಡು: ನೇಣು ಬಿಗಿದು ಯುವಕ ಆತ್ಮಹತ್ಯೆ
ಕಾಸರಗೋಡು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ ಕಾಸರಗೋಡಿನ ಬದಿಯಡ್ಕ ದಲ್ಲಿ ನಡೆದಿದೆ.
ಬದಿಯಡ್ಕ ಶಾಸ್ತ್ರಿ ಕೌಂಪೌಂಡ್’ನ ದಿನೇಶ್ ಆಚಾರ್ಯ (35) ಮೃತ ಪಟ್ಟವರು. ಬೆಳಿಗ್ಗೆ ಮನೆ ಸಮೀಪದ ಖಾಸಗಿ ವ್ಯಕ್ತಿಯೋರ್ವರ ಹಿತ್ತಿಲಿನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ದಿನೇಶ್ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದ ಗಣೇಶ್ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು.
ಶೋಧ ನಡೆಸಿದಾಗ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶವಾಗಾರದಲ್ಲಿ ಇರಿಸಲಾಗಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.