March 18, 2026

ಉಪ್ಪುಂದ: ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು: ಚಾಲಕ ಮೃತ್ಯು

0
image_editor_output_image1637062535-1703917085678.jpg

ಉಪ್ಪುಂದ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಶುಕ್ರವಾರ ಮಧ್ಯರಾತ್ರಿ ಕಂಬದಕೋಣೆಯಲ್ಲಿ ಸಂಭವಿಸಿದೆ.

ಕಾರು ಚಾಲಕ ಪ್ರದ್ಯೋತ್ ಮ್ರತ ಪಟ್ಟ ದುರ್ದೈವಿ ಎನ್ನಲಾಗಿದೆ.

ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಂಬದಕೋಣೆ ಜಂಕ್ಷನ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ ಪರಿಣಾಮ ಡಿವೈಡರ್ ಏರಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದ ವೇಳೆ ನುಜ್ಜುಗುಜ್ಜಾದ ಕಾರಿನೊಳಗೆ ಸಿಲುಕಿದ್ದ ಕಾರಿನ ಚಾಲಕನನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು.

ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷೀಸಿದ ವೈದ್ಯರು ಮ್ರತಪಟ್ಟಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!