April 11, 2025

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

0

ಬೆಂಗಳೂರು: ಶನಿವಾರ ತಡರಾತ್ರಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರದ 80 ಅಡಿ ರಸ್ತೆಯಲ್ಲಿ ನಡೆದಿದೆ.

ವಿಜಯ್ (21) ಹತ್ಯೆಯಾದ ಯುವಕ. ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಹತ್ಯೆಗೈದಿದ್ದಾರೆ. ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!