ಕಾಸರಗೋಡು: ನೇಣು ಬಿಗಿದು ಯುವತಿ ಆತ್ಮಹತ್ಯೆ
ಕಾಸರಗೋಡು: ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ನಡೆದಿದೆ.
ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತಪಟ್ಟ ಯುವತಿ.
ಶನಿವಾರ ರಾತ್ರಿ ಮಲಗಿದ್ದ ಈಕೆ ಮರುದಿನ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಗಾಬರಿಗೊಂಡ ಮನೆಯವರು ಶೋಧ ನಡೆಸಿದ್ದು, ಇನ್ನೊಂದು ಕೋಣೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇನ್ನು ಪರಿಸರ ವಾಸಿಗಳು ಹಾಗೂ ಮನೆಯವರು ಬಾಗಿಲು ಮುರಿದು ನೋಡಿದಾಗ ರೆನಾ ಫಾತಿಮಾಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಯುವತಿಗೆ ಯುವಕನೋರ್ವ ಕಿರುಕುಳ ನೀಡುತ್ತಿದ್ದುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ರೆನಾ ಫಾತಿಮಾಳ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.