December 18, 2025

ಉಳ್ಳಾಲ: ಪರಿಶಿಷ್ಟ ವರ್ಗದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ:
ಆರೋಪಿಯ ಬಂಧನ

0
IMG-20240102-WA0003.jpg

ಉಳ್ಳಾಲ: ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

17 ವರ್ಷ ವಯಸ್ಸಿನ ಅಪ್ರಾಪ್ತ ಹಾಗೂ ಪರಿಶಿಷ್ಟ ಜಾತಿಯ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಣಜೂರು ನಿವಾಸಿ ಆರೋಪಿ ಮಹಮ್ಮದ್ ರಝೀನ್ ಎಂಬಾತನು ಪ್ರೀತಿಸುವುದಾಗಿ ಹೇಳಿ ಸುಮಾರು 4 ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಮೂಡಿಗೆರೆ ತಾಲೂಕಿನ ಆಣಜೂರಿನ ಗ್ರಾಮದಿಂದ ಮಂಗಳೂರಿನ ಪಂಪ್ ವೆಲ್ ಗೆ ಬಸ್ಸಿನಲ್ಲಿ ಬರಮಾಡಿಸಿಕೊಂಡು ಬಳಿಕ ಆತನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ನಿನ್ನನ್ನು ಮದುವೆಯಾಗುತ್ತೇನೆಂದು ಹೇಳಿ ಒತ್ತಾಯಪೂರ್ವಕವಾಗಿ ನೊಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಮೊಹಮ್ಮದ್ ರಝೀನ್ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿತನಿಗೆ ನ್ಯಾಯಾಂಗ ಬಂಧನವಾಗಿರುತ್ತದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!