April 11, 2025

ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಟೊ ಪಲ್ಟಿ

0

ಹುಣಸೂರು: ನಗರದ ಬೈಪಾಸ್ ರಸ್ತೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಕೆ.ಆರ್.ನಗರ ಬೈಪಾಸ್‌ನ ತಿರುವಿನಲ್ಲಿ ನಡೆದಿದೆ.

ಘಟನೆಯಲ್ಲಿ ಆಟೋ ಚಾಲಕ ನಸ್ರುಲ್ಲಾ, ತಮಿಳುನಾಡಿನ ಗಂಗಾಧರ್, ಅಭಿಷೇಕ್, ಮನೋಜ್‌ಕುಮಾರ್ ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-275ರ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ತಮಿಳುನಾಡು ಮೂಲದವರ ಕಾರಿನ ಟೈರ್ ಪಂಚರಾಗಿದ್ದನ್ನು ಗಮನಿಸುತ್ತಿದ್ದ ವ್ಯಕ್ತಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿದಂತೆ ಕಾರಿನವರಿಗೆ ಗಾಯವಾಗಿತ್ತು.

 

 

ಗಾಯಾಳುವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಬೈಪಾಸ್ ರಸ್ತೆಯ ಕೆ.ಆರ್.ನಗರ ಕ್ರಾಸ್ ಬಳಿ ಎದುರಿನಿಂದ ವೇಗವಾಗಿ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಆಟೋ ಪಲ್ಟಿಯಾಗಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ.

ದಾರಿ ಹೋಕರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡೂ ಪ್ರಕರಣ ದಾಖಲಿಸಿಕೊಂಡಿರುವ ನಗರ ಠಾಣೆ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!