ಕಲ್ಯಾಣ ಮಂಟಪದಲ್ಲೇ ವರದಕ್ಷಿಣೆಗೆ ಬೇಡಿಕೆ: ಸರಕಾರಿ ನೌಕರನ ಬಂಧನ
ಬೆಳಗಾವಿ: ಮದುವೆ ದಿನ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನೊಬ್ಬ ವರದಕ್ಷಿಣೆಗೆ ಬೇಡಿಕೆಯಿಟ್ಟು ಹೈಡ್ರಾಮಾ ನಡೆಸಿ ಪೊಲೀಸರ ಅತಿಥಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಡಿಸಿ ಕಚೇರಿಯಲ್ಲಿ ಎಸ್‌ಡಿಸಿ ಆಗಿರುವ ಸಚಿನ್ ಪಾಟೀಲ್ ಹೈಡ್ರಾಮಾ ನಡೆಸಿದ ವರ. ಈತ ಕಲ್ಯಾಣಮಂಟಪದಲ್ಲಿ ನಡೆಯುತ್ತಿದ್ದ ಅರಿಶಿಣ ಕಾರ್ಯಕ್ರಮದಲ್ಲಿ 200 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ನೀಡುವಂತೆ ವಧುವಿನ ಮನೆಯವರಿಗೆ ಡಿಮ್ಯಾಂಡ್ ಇಟ್ಟಿದ್ದಾನೆ.
ವರನ ಡಿಮ್ಯಾಂಡ್‌ಗೆ ವಧುವಿನ ಸಂಬಂಧಿಕರು, ಮದುವೆಯಲ್ಲಿ ಪಾಲ್ಗೊಂಡ ಜನರು ತಬ್ಬಿಬ್ಬಾಗಿದ್ದಾರೆ. ಅಲ್ಲದೇ ನಾವು ಬಡವರು ಇಷ್ಟೊಂದು ಹಣ, ಚಿನ್ನಾಭರಣ ಎಲ್ಲಿಂದ ಕೊಡೋದು ಎಂದು ವಧುವಿನ ಪೋಷಕರು ಅಳಲು ತೋಡಿಕೊಂಡಿದ್ದಾರೆ.
ಈ ವೇಳೆ ವರದಕ್ಷಿಣೆ ಕೊಡದ ಹಿನ್ನೆಲೆ ಹಳದಿ ಕಾರ್ಯಕ್ರಮ ನಡೆಯುವಾಗಲೇ ಮಂಟಪದಿಂದ ವರ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ನಾನು ಹಳದಿ ಕಾರ್ಯದಲ್ಲಿ ಪಾಲ್ಗೊಳ್ಳಲ್ಲ ಎಂದು ಹೈಡ್ರಾಮ ನಡೆಸಿದ್ದಾನೆ.
ಈ ವೇಳೆ ಮದುವೆ ದಿನ ವಿಚಿತ್ರವಾಗಿ ನಡೆದುಕೊಂಡ ವರನಿಗೆ ಹುಡುಗಿ ಮನೆಯವರು ಗೂಸಾ ನೀಡಿದ್ದು, ಕಲ್ಯಾಣ ಮಂಟಪದಿಂದ ಎಸ್ಕೇಪ್ ಆಗಲು ಯತ್ನಿಸಿದ್ದ ವರನನ್ನು ರೂಂನಲ್ಲೇ ಲಾಕ್ ಮಾಡಿದ್ದಾರೆ





