ಬಸ್, ಜೀಪ್ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು, ಐವರು ಗಂಭೀರ
ಹುಣಸೂರು: ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಐವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ನಗರದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.
ಪಿರಿಯಾಪಟ್ಟಣಕ್ಕೆ ಶುಂಠಿ ಕೊಲೆಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಜೀಪಿನಲ್ಲಿದ್ದವರು ಹೊರಗೆಸೆಯಲ್ಪಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಎಚ್.ಡಿ.ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಕೂಲಿ ಕಾರ್ಮಿಕರು ಎನ್ನಲಾಗಿದ್ದು. ಗಂಭೀರ ಗಾಯಗೊಂಡಿದ್ದ ಐದು ಮಂದಿಯನ್ನು ಹುಣಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಘಟನಾ ಸ್ಥಳಕ್ಕೆ ಇನ್ಸ್ ಪೆಕ್ಟರ್ ದೇವೆಂದ್ರ ನೇತೃತ್ವಡಾ ಪೊಲೀಸರ ತಂಡ ಧಾವಿಸಿ ಅಪಘಾತದಲ್ಲಿ ಸಾವನ್ನಪ್ಪಿದ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.





