ಕಲ್ಲಡ್ಕ ಪ್ರಭಾಕರ ಭಟ್ ಮೇಲಿಂದ ಇಳಿದು ಬಂದಿಲ್ಲ, ಆತನ ಮೇಲೂ ಕ್ರಮ: ಸಚಿವ ಶಿವರಾಜ್ ತಂಗಡಗಿ
ಮೈಸೂರು: ಕಲ್ಲಡ್ಕ ಪ್ರಭಾಕರ ಭಟ್ ಮೇಲಿಂದ ಇಳಿದು ಬಂದಿಲ್ಲ, ಆತನ ಮೇಲೂ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸಲು ಸರ್ಕಾರ ವಿಫಲವಾಯಿತೇ ಎಂಬ ಮಾಧ್ಯಮಗಳ ಪ್ರಶ್ನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾರನ್ನೂ ಪೋಷಣೆ, ರಕ್ಷಣೆ ಮಾಡುವ ಮಾತೇ ಇಲ್ಲ ಎಂದರು.





