April 11, 2025

ಬೆಳ್ತಂಗಡಿ: ಪಾರ್ಟಿ ವೇಳೆ ಮೂಗು ಕಚ್ಚಿ ತುಂಡರಿಸಿದ ಪ್ರಕರಣ: ಆರೋಪಿ ಬಂಧನ

0

ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿ ವೇಳೆ ಸ್ನೇಹಿತನೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಮೂಡಿಗೆರೆ ತಾಲೂಕಿನ ರಾಕೇಶ್ (21) ವೇಣೂರು ಪೊಲೀಸರು ಬಂಧಿಸಿದ್ದಾರೆ.

ಪ್ರಸ್ತುತ ರಾಕೇಶ್ ಬೆಳ್ತಂಗಡಿಯ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ಹೊಸ ವರ್ಷದ ಆಚರಣೆಯ ಪಾರ್ಟಿ ವೇಳೆ ಸ್ನೇಹಿತ ದೀಕ್ಷಿತ್ (28) ನೊಂದಿಗೆ ಗಲಾಟೆ ಮಾಡಿಕೊಂಡು ಕೋಪದಲ್ಲಿ ಆತನ ಮೂಗು ಕಚ್ಚಿ ಗಾಯಮಾಡಿದ್ದ.

ಘಟನೆ ಬಳಿಕ ದೀಕ್ಷಿತ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿ ರಾಕೇಶ್ ವಿರುದ್ಧ ದೀಕ್ಷಿತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಜ. 2ರಂದು ಆರೋಪಿ ರಾಕೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.

 

 

Leave a Reply

Your email address will not be published. Required fields are marked *

error: Content is protected !!