May 17, 2026

ಪುತ್ತೂರು: ಮೈ ಮೇಲೆ ಪ್ರೇತ ಬರುತ್ತೆಂದು 3 ತಿಂಗಳಿಂದ ಪತ್ನಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟಿದ್ದ ಪತಿ:
ಸ್ಥಳಕ್ಕೆ ಅಧಿಕಾರಿಗಳ ಭೇಟಿ

0
IMG-20240103-WA0034.jpg

ಪುತ್ತೂರು: ಮೈ ಮೇಲೆ ಪ್ರೇತ ಬರುವ ನೆಪವೊಡ್ಡಿ ಎಂದು ಮಹಿಳೆಯನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದ ಘಟನೆ ಪುತ್ತೂರು ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಎಂಬಲ್ಲಿ ನಡೆದಿದೆ. ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ದಿಗ್ಬಂಧನದಿಂದ ಮಹಿಳೆಯನ್ನು ಬಿಡುಗಡೆಗೊಳಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮೈ ಮೇಲೆ ಪ್ರೇತ ಬರುತ್ತೆ ಎಂದು ಕಳೆದ ಮೂರು ತಿಂಗಳಿನಿಂದ ಮಹಿಳೆಯನ್ನು ಕೊಠಡಿಯಲ್ಲಿ ಬಂಧಿಸಲಾಗಿತ್ತು. ಶ್ರೀಪತಿ ಹೆಬ್ಬಾರ್ ಎಂಬಾತನ ಪತ್ನಿ ಆಶಾಲತಾ ಅವರನ್ನು ದಿಗ್ಬಂಧನದಲ್ಲಿಡಲಾಗಿತ್ತು.

ಶ್ರೀಪತಿ ಹೆಬ್ಬಾರ್ ಅಡುಗೆ ವೃತ್ತಿ ಮಾಡುತ್ತಾರೆ. ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆಶಾಲತಾ ಜೊತೆ ಅಂತರ್ಜಾತಿ ವಿವಾಹವಾಗಿದ್ದರು. ಆಕೆಯ ಮೇಲೆ‌ ಪ್ರೇತ ಬರುತ್ತಿದೆ ಎಂದು ಆರೋಪಿಸಿ ಮನೆ ಪಕ್ಕದ ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು. ಕೇವಲ ಒಂದು ಹೊತ್ತು ಚಹಾ ಮತ್ತು ಬಿಸ್ಕತ್ತು ತಿನ್ನಲು ನೀಡಲಾಗುತ್ತಿತ್ತು. ಸ್ಥಳೀಯರ ದೂರಿನ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!