February 3, 2026

ಚಿತ್ರದುರ್ಗ: ಕೆಟ್ಟು ನಿಂತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ:
ನಾಲ್ವರು ಮೃತ್ಯು

0
n3383926681638588092043e65becd6c2b46336bc85b85519c3de94c994ef107ea4af39cef79820a98bd933.jpg

ಚಿತ್ರದುರ್ಗ: ಪಂಚರ್ ಆಗಿ ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಪಂಚರ್ ಆಗಿ ನಿಂತಿದ್ದ ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿಯಾಗಿದೆ. ಈರುಳ್ಳಿ ಲಾರಿಗೆ ಪಂಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಇವರುಗಳು ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದರು. ಈ ವೇಳೆ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!