ಹೋಟೆಲ್‌ನಲ್ಲಿ ಮಾಡೆಲ್ ದಿವ್ಯಾ ಪಹುಜಾ ಮೃತದೇಹ ಪತ್ತೆ
ನವದೆಹಲಿ: ಗುರುಗ್ರಾಮ್‌ನ ಹೋಟೆಲ್‌ವೊಂದರಲ್ಲಿ 27 ವರ್ಷದ ಮಾಜಿ ಮಾಡೆಲ್ ಒಬ್ಬಳನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದಾಕೆಯನ್ನು ದಿವ್ಯಾ ಪಹುಜಾ ಎಂದು ಗುರುತಿಸಲಾಗಿದ್ದು, ಕೊಲೆ ನಡೆದ ಹೋಟೆಲ್‌ನ ಮಾಲೀಕ ಅಭಿಜಿತ್ ಸಿಂಗ್ ಎಂಬಾತ ಆಕೆಯನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಶಂಕಿತ ಆರೋಪಿ ಅಭಿಜಿತ್ ಸೇರಿದಂತೆ ಪ್ರಕಾಶ್ ಮತ್ತು ಇಂದ್ರಜ್ ಎಂಬವರನ್ನು ಗುರುಗ್ರಾಮ್ ಕ್ರೈಂ ಬ್ರಾಂಚ್ ಬಂಧಿಸಿದೆ. ಪ್ರಕಾಶ್ ಮತ್ತು ಇಂದ್ರಜ್ ಇಬ್ಬರೂ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ.





